ಎನ್ಕೌಂಟರ್, ಐವರು ಉಗ್ರರು ಖತಂ

  • In State
  • June 13, 2020
  • 195 Views
ಎನ್ಕೌಂಟರ್, ಐವರು ಉಗ್ರರು ಖತಂ

ಶ್ರೀನಗರ, ಜೂ. 13 : ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದಕರ ಹುಟ್ಟಡಗಿಸುವ ಕಾರ್ಯಾಚರಣೆ ಭಾರತೀಯ ಯೋಧರು ಮತ್ತಷ್ಟು ಬಿರುಸುಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಉಗ್ರಗಾಮಿಗಳ ಉಪಟಳ ತೀವ್ರಗೊಂಡಿದ್ದು, ಎರಡು ಕಡೆ ಯೋಧರೊಂದಿಗೆ ನಡೆದ ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಐವರು ಉಗ್ರಗಾಮಿಗಳು ಹತರಾಗಿದ್ದಾರೆ. ಮೃತ ಆತಂಕವಾದಿಗಳಿಂದ ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯೊಂದಿಗೆ ಐದು ದಿನಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಒಟ್ಟು 18 ಉಗ್ರಗಾಮಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ನಡೆದ ಎರಡು ಎನ್ಕೌಂಟ್ಗಳಲ್ಲಿ ಒಟ್ಟು ಐವರು ಉಗ್ರರು ಹತರಾಗಿದ್ಧಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Related