ಶಿಕ್ಷಣ ಜೊತೆಗೆ ಕ್ರೀಡಾ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ: ಸಚಿವ ಬಿ. ನಾಗೇಂದ್ರ

ಶಿಕ್ಷಣ ಜೊತೆಗೆ ಕ್ರೀಡಾ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ: ಸಚಿವ ಬಿ. ನಾಗೇಂದ್ರ

ಬೆಳಗಾವಿ: ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಾಲಾ ಮಟ್ಟದಲ್ಲೇ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಿ ಸ್ಥಳೀಯ ಕ್ರೀಡೆಗಳ ಜೊತೆಗೆ ರಾಷ್ಟ್ರೀಯ ಕ್ರೀಡೆಗಳ ಬಗ್ಗೆ ತರಬೇತಿ ನೀಡಿ ರಾಜ್ಯ ಹಾಗೂ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಜ್ಯದ ಕ್ರೀಡಾ ಸಾಮರ್ಥ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ಈ ಭಾರಿ ವಿಶೇಷವಾಗಿ ಬೆಳಗಾವಿ ಅಧಿವೇಶನದ ವೀಕ್ಷಣೆಗೆ ಬರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕ್ರೀಡೆಯ ಉಮ್ಮಸ್ಸು ಮೂಡಿಸುವ ನಿಟ್ಟಿನಲ್ಲಿ ಇದೇ ಮೊಟ್ಟಮೊದಲ ಭಾರಿಗೆ ಸುವರ್ಣ ಸೌಧ ಆವರಣದಲ್ಲಿ ಸಾಹಸ ಕ್ರೀಡೆ ಆಯೋಜನೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ತಿಳಿಸಿದರು

ಇಂದು (ಡಿ. 07 ಗುರುವಾರ) ಬೆಳಗಾವಿ ಸುವರ್ಣಸೌಧದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಆಯೋಜಿಸಿದ್ದ ಸಾಹಸ ಗೋಡೆ ಕ್ರೀಡೆ (ವಾಲ್ ಕ್ಲೇಬಿಂಗ್) ಕ್ರೀಡೆಗೆ ಮಾತನಾಡಿದ ಅವರು, ನಮ್ಮ ಸಿದ್ದರಾಮಯ್ಯ ರವರ ಸರ್ಕಾರ ಇಡೀ ದೇಶದಲ್ಲಿ ಪದಕ ಪಡೆದ ಅಂತರ್ ರಾಷ್ಟ್ರೀಯ  ಕ್ರೀಡಾಪಟುಗಳಿಗೆ 5 ಕೋಟಿ ನಗದು ಹಾಗೂ ಒಲಂಪಿಕ್ ಪ್ಯಾರ ಒಲಂಪಿಕ್ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಉದ್ಯೋಗ ನೀಡುವ ಬಗ್ಗೆ ಚಿಂತನೆ ನಡೆಸಿದ್ದು ಈಗಾಗಲೇ ಸರ್ಕಾರದ ಮಟ್ಟದಲ್ಲಿ ಕಡತಗಳು ರವಾನೆಯಾಗಿದ್ದು ಶೀಘ್ರದಲ್ಲಿ ನೇಮಕಾತಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.

ನೂತನ ಕ್ರೀಡಾಂಗಣಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ 125 ಹೊಸ ತಾಲ್ಲೂಕು ಕ್ರೀಡಾಂಗಣಗಳನ್ನು ನಿರ್ಮಾಣ ಮಾಡಲು ಈಗಾಗಲೇ ಕ್ರಿಯಾಯೋಜನೆ ತಯಾರಿ ಮಾಡಲಾಗಿದೆ ನಮ್ಮ ರಾಜ್ಯದ ಕ್ರೀಡಾಪಟುಗಳ ಪರವಾಗಿ ನಮ್ಮ ಸರಕಾರ ಸಿದ್ದವಾಗಿದೆ ಎಂದು ತಿಳಿಸಿದರು.

ವಿಧಾನಸಭಾ ಸಭಾಧ್ಯಕ್ಷರಾದ ಯು. ಟಿ. ಖಾದರ್ & ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಹಾಗೂ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ರವರ ನೇತೃತ್ವದಲ್ಲಿ ಚಾಲನೆ ನೀಡಿದರು.

Related