ಬೆಂಗಳೂರು: ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಡಿ.ಎಲ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಡಿ.ಎಲ್ ಕೃಷ್ಣಮೂರ್ತಿಯವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹೊಸೂರು ಮುಖ್ಯ ರಸ್ತೆಯಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಚಾರ್ಯರ, ಸಿಬ್ಬಂದಿವರ್ಗ ಮತ್ತು ತರಬೇತಿದಾರರು ಉಪಸ್ಥಿತರಿದ್ದರು