ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಮಲ್ಟಿಆರ್ಗನ್ ಡಿಸ್ಫಂಕ್ಷನ್ ಸಿಂಡ್ರೋಮ್’ಗೆ ತುತ್ತಾಗಿದ್ದ ಜಸ್ವಂತ್ ಅವರು ಬೆಳಕ್ಕೆ ಹೃದಯಾಘಾತ ಎದುರಾಗಿ ಬೆಳಿಗ್ಗೆ 6.55ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ದೆಹಲಿಯ ಸೇನಾ ಆಸ್ಪತ್ರೆ ಮಾಹಿತಿ ನೀಡಿದೆ.

ಜಸ್ವಂತ್ ಸಿಂಗ್ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

Related