ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆ ಎಸ್ ಈಶ್ವರಪ್ಪ ಅವರ ಪುತ್ರಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡದಿದ್ದ ಕಾರಣ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಕೆಎಸ್ ಈಶ್ವರಪ್ಪ ಅವರು ಈಗ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕಿಳಿದಿದ್ದಾರೆ.

ಅದರಂತೆ ಇಂದು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಕಡಿವಾನ ಹಾಕಲೆಂದು ನಾನು ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಈ ರೀತಿ ಬೃಹತ್ ಸಂಖ್ಯೆಯಲ್ಲಿ ನಮಗೆ ಬೆಂಬಲಕ್ಕೆ ನಿಂತ ಮತದಾರರಿಗೆ ಧನ್ಯವಾದಗಳು, ಇಂದು ಎಲ್ಲಾ ಜಾತಿ, ಧರ್ಮದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಅವರೆಲ್ಲರ ಆಸೆ ನಾನು ಗೆಲ್ಲಬೇಕೆಂದು ಆಗಿದೆ ಎಂದರು.

ಇದಕ್ಕೂ ಮುನ್ನ ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ನಗರದಲ್ಲಿರುವ ಕೋಟೆ ಮಾರಿಕಾಂಬ ದೇವಸ್ಥಾನಕ್ಕೂ ತೆರಳಿ ವಿಶೇಷ ಪೂಜೆ ಸಲ್ಲಿಸಿತು. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಮಗ ಕಾಂತೇಶ್ ಗೆ ಟಿಕೆಟ್ ನೀಡದಿರುವ ಕಾರಣ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಈಶ್ವರಪ್ಪ ಖುದ್ದು ತಾವೇ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಬಿಜೆಪಿಯ ಬಿವೈ ರಾಘವೇಂದ್ರ ಮತ್ತು ಕಾಂಗ್ರೆಸ್ ನ ಗೀತಾ ಶಿವರಾಜಕುಮಾರ್ ಈಶ್ವರಪ್ಪನವರ ಎದುರಾಳಿಯಾಗಿದ್ದಾರೆ.

 

Related