ಈಶ್ವರಪ್ಪ ಅನಧಿಕೃತವಾಗಿ ಮೋದಿ ಫೋಟೋ ಬಳಸುತ್ತಿದ್ದಾರೆ: ಆರ್ ಅಶೋಕ್

ಈಶ್ವರಪ್ಪ ಅನಧಿಕೃತವಾಗಿ ಮೋದಿ ಫೋಟೋ ಬಳಸುತ್ತಿದ್ದಾರೆ: ಆರ್ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ಸ್ವಪಕ್ಷದ ನಾಯಕರುಗಳ ಮದ್ಯದಲ್ಲಿಯೇ ವೈಫಲ್ಯ ಮೂಡಿ ಬಂದಿರುವುದು ಕಂಡುಬಂದಿದೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆ ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ನೀಡದ ಕಾರಣ ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಎಲ್ಲಾ ರೀತಿಯ ತಯಾರು ಮಾಡಿಕೊಂಡಿದ್ದು, ತಮ್ಮದೇ ಆದ ಕಚೇರಿಯನ್ನು ಕೂಡ ಮಾಡಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಈಶ್ವರಪ್ಪ ಅವರು ಮೋದಿ ಫೋಟೋವನ್ನು ಬಳಸಿಕೊಳ್ಳುತ್ತಿದ್ದಾರೆ.

ಇನ್ನು ಮೋದಿ ಫೋಟೋ ಬಳಸುತ್ತಿರುವ ಈಶ್ವರಪ್ಪ ಅವರ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಬಳಸಿಕೊಳ್ಳಲು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅರ್ಹತೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಈಶ್ವರಪ್ಪ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಅವರು ಬಳಕೆ ಮಾಡಿದರೆ ಅದು ತಪ್ಪು. ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಸಿಕೊಳ್ಳಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ‌ ಬಿಜೆಪಿಗೆ ಮಾತ್ರ ಮೋದಿ ಫೋಟೊ ಬಳಕೆಗೆ ಅಧಿಕಾರ ಇದೆ. ಈಶ್ವರಪ್ಪ ಅನಧಿಕೃತವಾಗಿ ಮೋದಿಯವರ ಫೋಟೋ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸಿದ ಬಳಿಕ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದರು.

 

Related