ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ

ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ

ಹಾಸನ: ಹಾಸನ ಜಿಲ್ಲೆ ಸಕಲೇಶಪುರದ ಹೆಬ್ಬನಹಳ್ಳಿ ಎಲೆಕ್ಟ್ರಿಕ್ ಸಬ್ ಸ್ಟೇಷನ್ ನಲ್ಲಿ ಮಂಗಳವಾರ ಜಲ  ಸಂಪನ್ಮೂಲ ಸಚಿವರು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಸಭೆಗೆ ಮೊದಲು ಡಿಸಿಎಂ ಅವರು ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿ, ಪವರ್ ಸಬ್ ಸ್ಟೇಷನ್ ಪರಿಶೀಲನೆ ನಡೆಸಿದರು.

ವಿಶ್ವೇಶ್ವರಯ್ಯ ಜಲ ನಿಗಮ ಆಯೋಜಿಸಿದ್ದ ಈ ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸತ್ಯಭಾಮ, ಸಿಇಓ ಪೂರ್ಣಿಮಾ, ವಿಜೆಎನ್ಎಲ್ ಎಂಡಿ ಸಣ್ಣ ಚಿತ್ತಯ್ಯ, ಎಸ್ಪಿ ಹರಿರಾಂ ಶಂಕರ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್, ತಾಂತ್ರಿಕ ಸಲಹೆಗಾರ ಜಯಪ್ರಕಾಶ್, ಪ್ರಮುಖ ಗುತ್ತಿಗೆದಾರರು ಭಾಗವಹಿಸಿದ್ದರು.

Related