6 ತಿಂಗಳು ಕಳೆದರೂ ಅಭಿರುದ್ದಿ ಕೆಲಸ ಇಲ್ಲ

6 ತಿಂಗಳು ಕಳೆದರೂ ಅಭಿರುದ್ದಿ ಕೆಲಸ ಇಲ್ಲ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ ಆರು ತಿಂಗಳು ಕಳೆಯುತ್ತಾ ಬಂದರೂ ಯಾವುದೇ ಒಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಸದನದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಇನ್ನು ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ರಾಜ್ಯ ಸರ್ಕಾರ ಕೇವಲ ಸಲಹೆಗಳನ್ನು ಪಡೆದುಕೊಳ್ಳುತ್ತಿದೆ ಹೊರತಾಗಿ ಯಾವುದೇ ರೀತಿ ಅಭಿವೃದ್ಧಿ ಕೆಲಸವನ್ನು ಕೈಗೊಂಡಿಲ್ಲ ಎಂದು ಗುಡುಗುತ್ತಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆಡಳಿತ ಪಕ್ಷದ ಶಾಸಕ ಎನ್.ಎ.ಹ್ಯಾರಿಸ್ ಅವರು ಪ್ರಶ್ನೆ ಕೇಳಿದರು. ಇದಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದರು.

ಡಿ.ಕೆ.ಶಿವಕುಮಾರ್‍ರವರು ಬ್ರಾಂಡ್ ಬೆಂಗಳೂರು ಕಲ್ಪನೆಯನ್ನು ಸಾಕಾರಗೊಳಿಸಲು ಆಸಕ್ತಿ ತೋರಿಸಿದ್ದಾರೆ. ಸುಮಾರು 70 ಸಾವಿರಕ್ಕೂ ಅಕ ಸಲಹೆಗಳು ಬಂದಿವೆ. ಅವುಗಳನ್ನು ಕ್ರೂಢೀಕರಿಸಲು 8 ಶೈಕ್ಷಣಿಕ ಸಂಸ್ಥೆಗಳನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸಚಿವರ ಉತ್ತರಕ್ಕೆ ಮುನ್ನವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ಸದಸ್ಯರಾದ ಭಾಸ್ಕರ್, ಸಿ.ಎನ್.ಅಶ್ವತ್ಥನಾರಾಯಣ, ವಿಪಕ್ಷ ನಾಯಕ ಆರ್.ಅಶೋಕ್, ಎಸ್.ಎಸ್.ವಿಶ್ವನಾಥ್ ಮತ್ತಿತರರು ಸರ್ಕಾರ ರಚನೆಯಾಗಿ 6 ತಿಂಗಳಾಗಿದೆ. ಇನ್ನೂ ಅಭಿವೃದ್ಧಿ ಸಲಹೆ ಪಡೆಯುವುದರಲ್ಲೇ ಕಾಲಾಹರಣ ಮಾಡಲಾಗುತ್ತಿದೆ. ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

Related