ಕಾಂಗ್ರೆಸ್ ಅಧಿಕಾರಕ್ಕೆ ಬಂದು 8 ತಿಂಗಳಾದರೂ ಅಭಿವೃದ್ಧಿ ಕೆಲಸ ಮಾಡಿಲ್ಲ: ಬಿ.ವೈ. ರಾಘವೇಂದ್ರ

ಕಾಂಗ್ರೆಸ್ ಅಧಿಕಾರಕ್ಕೆ ಬಂದು 8 ತಿಂಗಳಾದರೂ ಅಭಿವೃದ್ಧಿ ಕೆಲಸ ಮಾಡಿಲ್ಲ: ಬಿ.ವೈ. ರಾಘವೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ 8 ತಿಂಗಳು ತುಂಬಿದರು ಕೂಡ ಯಾವೊಂದು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿಲ್ಲ, ಎಲ್ಲಾ ಅಭಿವೃದ್ಧಿ ಕೆಲಸವನ್ನು ನಮ್ಮ ಬಿಜೆಪಿ ಸರ್ಕಾರವೇ ಮಾಡಿದೆ ಎಂದು ಬಿಜೆಪಿಯ ಸಂಸದ ಬಿ ವೈ ರಾಘವೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಿವಮೊಗ್ಗ ಜಿಲ್ಲೆಗೆ ಹಲವಾರು ರೀತಿಯ ಅಭಿವೃದ್ಧಿ ಕಾರ್ಯಗಳನ್ನು ನಮ್ಮ ಬಿಜೆಪಿ ಸರ್ಕಾರ ಮಾಡಿದೆ. ಆದರೆ ಅಧಿಕಾರದಲ್ಲಿರುವ ಈಗಿರುವ ಕಾಂಗ್ರೆಸ್ ಸರ್ಕಾರ ನಮ್ಮ ಶಿವಮೊಗ್ಗ ಜಿಲ್ಲೆಗೆ ಏನು ಅಭಿವೃದ್ಧಿ ಕೆಲಸ ಮಾಡಿದೆ ಎಂದು ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ

ಇನ್ನು ಶಿವಮೊಗ್ಗ ಜಿಲ್ಲೆಗೆ ಅಭಿವೃದ್ಧಿ ಕೆಲಸ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರುಗಳೆ ಪದೇ ಪದೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದರು. ಜಿಲ್ಲೆಯಲ್ಲಿ ಹೊಸ ಅಭಿವೃದ್ಧಿ ಯೋಜನೆಗಳಿಗೆ ದುಡ್ಡು ಕೊಡೋದಿರಲಿ, ಸದ್ಯ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಧಮ್ಕಿ ಹಾಕೋದು ನಿಲ್ಲಿಸಿದರೆ ಸಾಕು ಎಂದು ಛೇಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡುತ್ತಾರೆ ಎಂದು ಕಾಂಗ್ರೆಸ್ಸಿಗರಿಗೆ ಟಾಂಗ್ ಕೊಟ್ಟಿದ್ದಾರೆ.

 

Related