ಕೊರೋನಾ ದೃಡಪಟ್ಟರೂ, ಮಳೆ ಅವಾಂತರ ಕುರಿತು ಆನ್ ಲೈನ್ ಸಂವಾದ..

ಕೊರೋನಾ ದೃಡಪಟ್ಟರೂ, ಮಳೆ ಅವಾಂತರ ಕುರಿತು ಆನ್ ಲೈನ್ ಸಂವಾದ..

ಬೆಂಗಳೂರು ಆಗಸ್ಟ್ 06: ನಿರಂತರ ಮಳೆಯಿಂದ ತತ್ತರಿಸಿದ ರಾಜ್ಯದ ಜಿಲ್ಲೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದರು ಸಹ ಇಂದು (ಶನಿವಾರ) ಸಂಜೆ 4ಗಂಟೆಗೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಆನ್ಲೈನ್ ಸಂವಾದ ನಡೆಸಲಿದ್ದಾರೆ.

ಸಂಜೆ 4ಗಂಟೆಗೆ ನಡೆಯಲಿರುವ ನೆರೆಪೀಡಿತ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳ ಜತೆಗಿನ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು ತಮ್ಮ ಆರ್.ಟಿ.ನಗರದ ನಿವಾಸದಿಂದಲೇ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಭಾರಿ ಮಳೆ ಮುಂದುವರಿದ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪ್ರವಾಹ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮ ಬಗ್ಗೆ ಚರ್ಚೆ, ನೆರೆಯಿಂದ ಉಂಟಾದ ಹಾನಿ ಕುರಿತು ಮಾಹಿತಿ ಪಡೆಯಲು ಮತ್ತು ಅಗತ್ಯ ಕ್ರಮ ಕುರಿತು ಅಧಿಕಾರಿಗಳಿಗೆ ಸೂಚಿಸಲು ಬೊಮ್ಮಾಯಿ ಸಭೆ ನಡೆಸಲಿದ್ದಾರೆ.

Related