ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಕೂಡ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ: ಗೃಹ ಸಚಿವ

ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಕೂಡ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ: ಗೃಹ ಸಚಿವ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಇನ್ನಿತರ ಪ್ರಕರಣಗಳು ನಡೆದಿದೆ.

ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಹೆಣ್ಣು ಮಕ್ಕಳಿಗೆ ಯಾವ ರೀತಿ ರಕ್ಷಣೆ ನೀಡಿದೆ? ಹಾಗಾದರೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಾತ್ರ ಮಹಿಳೆಯರಿಗೆ ರಕ್ಷಣೆ ನೀಡುತ್ತಾರೆ? ಎಂದು ಗೃಹ ಸಚಿವ ಪರಮೇಶ್ವರ ಅವರು ಪ್ರಶ್ನಿಸಿದ್ದಾರೆ

ನಗರದಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ನಾವು ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಈಗಾಗಲೇ ಅದರ ಬಗ್ಗೆ ನಾವು ಕ್ರಮ ತೆಗೆದುಕೊಂಡಿದ್ದೇವೆ.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾತ್ರ ಮಹಿಳೆಯರ ಮೇಲೆ ದೌರ್ಜನ್ಯ , ಅತ್ಯಾಚಾರ ಇನ್ನಿತರ ಪ್ರಕರಣಗಳು ನಡೆದಿಲ್ಲ. ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಕೂಡ ಮಹಿಳೆಯರ ಮೇಲೆ ದೌರ್ಜನ್ಯ ಅತ್ಯಾಚಾರ ಇನ್ನಿತರ ಪ್ರಕರಣಗಳು ನಡೆದಿವೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.

ಇನ್ನು ಮಹಿಳೆಯರ ರಕ್ಷಣೆಗೆಂದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನಿರ್ಭಯ ಕಾರ್ಯಕ್ರಮವನ್ನು ನಾವು ಈಗಾಗಲೇ ಹಮ್ಮಿಕೊಂಡಿದ್ದೇವೆ. ಮಹಿಳೆಯರ ರಕ್ಷಣೆಗಾಗಿ ನಾವು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಅದರಲ್ಲೂ ಕೂಡ ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ರಕ್ಷಣೆಗಳನ್ನು ಒದಗಿಸುತ್ತಿದ್ದೇನೆ ಎಂದು ಹೇಳಿದರು.

ಇನ್ನು ಮಹಿಳೆಯರ ಮೇಲೆ ಅತ್ಯಾಚಾರದ ಪ್ರಕರಣ ಇನ್ನಿತರ ಪ್ರಕರಣಗಳು ಕಂಡು ಬಂದರೆ ನಮ್ಮ ಸರ್ಕಾರ ತಕ್ಷಣವೇ ಇಂಥ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು. ರಾಜ್ಯದಲ್ಲಿರುವ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲ ಎನ್ನುವುದು ಸರಿಯಲ್ಲ ಎಂದು ಹೇಳಿದರು.

Related