ಎಲ್ಲರ ಚಿತ್ತ ಆದಿಪುರುಷನತ್ತ

ಎಲ್ಲರ ಚಿತ್ತ ಆದಿಪುರುಷನತ್ತ

ಪಂಚ ಭಾಷೆಗಳಲ್ಲಿ ತೆರೆಕಂಡಿರುವ ಆದಿಪುರುಷ ಚಿತ್ರವು ಇಂದು ದೇಶದಾದ್ಯಂತ ಬಿಡುಗಡೆಯಾಗಿದ್ದು ಎಲ್ಲಾ ಚಿತ್ರಮಂದಿರಗಳಲ್ಲೂ ಹೌಸ್ ಫುಲ್ ಪ್ರದರ್ಶನ  ಕಾಣುತಿರುವುದರಿಂದ ಆದಿಪುರುಷನ ಮೊದಲ ದಿನದ ಕಲೆಕ್ಷನ್ ಎಷ್ಟು ಎಂದು ಎಲ್ಲರೂ ಕಣ್ಣು ಆದಿಪುರುಷನ ಮೇಲೆ.

ಉತ್ತರ ಭಾರತದಲ್ಲಿ ‘ಆದಿಪುರುಷ್​’ ಸಿನಿಮಾದ ಹವಾ ಜೋರಾಗಿದೆ. ಮೊದಲ ದಿನ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಆಗಿದೆ. ಹಾಗಾಗಿ 85 ಕೋಟಿ ರೂಪಾಯಿ ಕಲೆಕ್ಷನ್​ ಆಗುತ್ತದೆ ಎಂದು ಕೆಲವರು ಅಂದಾಜಿಸಿದ್ದಾರೆ.

ಯಾವುದೇ ಬಿಗ್​ ಬಜೆಟ್​ ಸಿನಿಮಾ ಬಿಡುಗಡೆ ಆದಾಗ ಅದರ ಫಸ್ಟ್​ ಡೇ ಕಲೆಕ್ಷನ್​ ಮೇಲೆ ಎಲ್ಲರೂ ಕಣ್ಣಿಟ್ಟಿರುತ್ತಾರೆ. ‘ಆದಿಪುರುಷ್​’ ಸಿನಿಮಾದ ವಿಚಾರದಲ್ಲೂ ಹಾಗೆಯೇ ಆಗಿದೆ. ನೂರಾರು ಕೋಟಿ ಬಜೆಟ್​ನಲ್ಲಿ ಈ ಚಿತ್ರ ತಯಾರಾಗಿದೆ. ಇಂದು ಗ್ರ್ಯಾಂಡ್​ ಆಗಿ ಈ ಸಿನಿಮಾ ರಿಲೀಸ್​ ಆಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹಿಂದಿ, ತಮಿಳು, ಕನ್ನಡ, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಆದಿಪುರುಷ್​’ ತೆರೆಕಂಡಿದೆ. ಪ್ರಭಾಸ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇರುವುದರಿಂದ ಎಲ್ಲ ಕಡೆಗಳಲ್ಲೂ ಉತ್ತಮ ಕಲೆಕ್ಷನ್​ ಆಗಲಿದೆ ಎಂದು ಊಹಿಸಲಾಗಿದೆ. ಮೊದಲ ದಿನವೇ 85 ಕೋಟಿ ರೂಪಾಯಿ ಗಳಿಕೆ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಊಹೆ ನಿಜವಾಗುತ್ತೋ ಇಲ್ಲವೋ ಎಂಬುದು ಗೊತ್ತಾಗಲು ಇನ್ನು ಕೆಲವೇ ಕೆಲವು ಗಂಟೆಗಳ ಕಾಲ ಕಾಯಬೇಕು.

 

Related