ಡಿಕೆಶಿ ಪರ ಬ್ಯಾಟ್‌ ಬೀಸಿದ ಮಾಜಿ ಸಚಿವ

ಡಿಕೆಶಿ ಪರ ಬ್ಯಾಟ್‌ ಬೀಸಿದ ಮಾಜಿ ಸಚಿವ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆದ್ದು ಬಂದಿದೆ. ಸಿಎಂ ಆಯ್ಕೆ ಇಕ್ಕಟ್ಟಿನಲ್ಲಿದ್ದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಸಿಎಂ ಪಟ್ಟಕ್ಕೆ ಪಟ್ಟು ಹಿಡಿದಿದ್ದಾರೆ.

ಇನ್ನು ಮಾಜಿ ಸಚಿವ ಸುಧಾಕರ್ ಅವರು ಡಿಕೆ ಶಿವಕುಮಾರ್ ಅವರ ಪರವಾಗಿ ವೈಯಕ್ತಿಕವಾಗಿ ಒಲವು ತೋರಿಸಿದ್ದಾರೆ.

ಎಸ್.ಎಂ ಕೃಷ್ಣ ಅವರ ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದು, ಪರೋಕ್ಷವಾಗಿ ಡಿಕೆಶಿ  ಪರ ಬ್ಯಾಟ್‌ ಬೀಸಿದ್ದಾರೆ.

ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ವೈಯಕ್ತಿಕವಾಗಿ ಹೇಳಿದ್ದೇನೆ. ಆದ್ರೆ ಅದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ ಎಂದಿದ್ದಾರೆ.

 

Related