Psi Scam ನಂತರ ಬಿಗಿ ಭದ್ರತೆ: ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಶಿಕ್ಷಕರ (ಪದವೀಧರ) 15,000 ಹುದ್ದೆಗಳಿಗೆ ಮೇ 21 ಮತ್ತು 22ರಂದು ನಡೆಯುವ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ (B.C Nagesh) ತಿಳಿಸಿದರು.

ಬೆಂಗಳೂರು(ಮೇ.11): ‘ಮಂಗಳವಾರ (ಮೇ 10) ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ಸಮಾಜ ವಿಜ್ಞಾನ, ಗಣಿತ, ಇಂಗ್ಲೀಷ್ ಮತ್ತು ಜೀವ ವಿಜ್ಞಾನ ಶಿಕ್ಷಕರ 15 ಸಾವಿರ ಹುದ್ದೆಗಳಿಗೆ (15,000 posts) ಅರ್ಜಿ ಆಹ್ವಾನಿಸಲಾಗಿತ್ತು.

ಬೆಂಗಳೂರು(ಮೇ.11): ‘ಮಂಗಳವಾರ (ಮೇ 10) ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ಸಮಾಜ ವಿಜ್ಞಾನ, ಗಣಿತ, ಇಂಗ್ಲೀಷ್ ಮತ್ತು ಜೀವ ವಿಜ್ಞಾನ ಶಿಕ್ಷಕರ 15 ಸಾವಿರ ಹುದ್ದೆಗಳಿಗೆ (15,000 posts) ಅರ್ಜಿ ಆಹ್ವಾನಿಸಲಾಗಿತ್ತು. 1.06 ಲಕ್ಷ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದ ಒಟ್ಟು 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ಯಾವುದೇ ಲೋಪ-ದೋಷಗಳು ಉಂಟಾಗದಂತೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ (Education Department) ಹಾಗೂ ಸಂಬಂಧಿಸಿದ ಇನ್ನಿತರ ಇಲಾಖೆಗಳ ಅಧಿಕಾರಿಗಳ ಜೊತೆ ವಿವಿಧ ಹಂತಗಳಲ್ಲಿ ಸಭೆ ನಡೆಸಲಾಗಿದೆ.

Related