ಸ್ಫೋಟ; ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

ಸ್ಫೋಟ; ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

ಚಿಕ್ಕಬಳ್ಳಾಪುರ : ಹಿರೇನಾಗವಲ್ಲಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿರುವ ಜಿಲೆಟಿನ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿರುವ ಈ ಘಟನೆ ಆಘಾತಕಾರಿಯಾಗಿದೆ. ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಿಂದ ಹಾಗೂ ಉನ್ನತ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇಲ್ಲಿನ ಮರವಾಸಿನಿ ಕ್ರಷರ್‌ನಿಂದ ಒಂದೂವರೆ ಕಿ.ಮೀ ದೂರದಲ್ಲಿರುವ ಅರಣ್ಯಕ್ಕೆ ಬೈಕ್ ಹಾಗೂ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹೊತ್ತು ತರುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ಅಭಿ, ವಾಚ್‌ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

Related