ಸ್ಫೋಟಕ ಸುದ್ದಿ:ಉಗ್ರ ಅಜರ್ ಸಾವು?

ಸ್ಫೋಟಕ ಸುದ್ದಿ:ಉಗ್ರ ಅಜರ್ ಸಾವು?

ರಾವಲ್ಪಿಂಡಿ, ಫೆ. 08 : ಮೂತ್ರ ಪಿಂಡ ತೀವ್ರ ವೈಫಲ್ಯದಿಂದ ಬಳಲುತ್ತಿದ್ದ ಜೈಷ್ ಮುಖ್ಯಸ್ಥ, ಪುಲ್ವಾಮಾ ದಾಳಿ ರೂವಾರಿ ಅಜರ್ .ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ ಎಂದು ಪಾಕ್ ಮಾಧ್ಯಮಗಳು ಸುದ್ದಿ ಬಿತ್ತರಿಸಿದ್ದವು. ಪಾಕಿಸ್ತಾನದ ರಾವಲ್ಪಿಂಡಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ ಭಾರತದ ಮಟ್ಟಿಗೆ ಇದು ಶುಭ ಸುದ್ಧಿಯಾಗಲಿದೆ. ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಸಂಘಟನೆಯ ಸ್ಥಾಪಕನಾಗಿದ್ದ ಮಸೂದ್ ಅಜರ್ ಸಾವಿನ ವಿಚಾರ ಖಚಿತವಾಗಬೇಕಿದೆ. ಫೆ. 26ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಉಗ್ರರ ಕ್ಯಾಂಪ್ ಗಳ ಮೇಲಿನ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ನಲ್ಲಿ ಮಸೂದ್ ಅಜರ್ ಗಾಯಗೊಂಡಿದ್ದ ಆತನನ್ನು ಪಾಕಿಸ್ತಾನ ರಹಸ್ಯವಾಗಿ ಸೇನಾಸ್ಪತ್ರೆಗೆ ದಾಖಲಿಸಿತ್ತು. ಸ್ಥಳೀಯರಿಗೆ ಲಿವರ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆಂದು ರಹಸ್ಯವನ್ನು ಪಾಕ್ ಸರ್ಕಾರ ಮರೆಮಾಡಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ.

Related