ಕೇರಳದಲ್ಲಿ ಸ್ಫೋಟಕ ವಸ್ತುಗಳು ಪತ್ತೆ

  • In Crime
  • August 4, 2022
  • 212 Views
ಕೇರಳದಲ್ಲಿ ಸ್ಫೋಟಕ ವಸ್ತುಗಳು ಪತ್ತೆ

ತಿರುವನಂತಪುರಂ, .04: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ 40 ಬಾಕ್ಸ್‌ಗಳಲ್ಲಿ ಬಾಂಬ್ ತಯಾರಿಸಲು ಬಳಸಬಹುದಾದ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಶೋರ್ನೂರಿನ ಕ್ವಾರಿಯೊಂದರ ಬಳಿ ಬಿಟ್ಟು ಹೋಗಿದ್ದ 40 ಬಾಕ್ಸ್‌ಗಳಲ್ಲಿ ಬಾಂಬ್ ತಯಾರಿಸಲು ಬಳಸಬಹುದಾದ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.

ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳನ್ನು ಇಡಲಾಗಿದ್ದ 40 ಬಾಕ್ಸ್‌ಗಳನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಎಲ್ಲಾ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಹಿಂದೆಯೂ ತೆರೆದ ಪ್ರದೇಶಗಳಲ್ಲಿ ಮತ್ತು ವಸತಿ ಪ್ರದೇಶಗಳ ಬಳಿ ಇಂತಹ ಸ್ಫೋಟಕ ವಸ್ತುಗಳನ್ನು ಗುರುತಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಕ್ವಾರಿ ಬಳಿ ಸ್ಫೋಟಕ ವಸ್ತುಗಳನ್ನು ಬಿಟ್ಟು ಹೋದವರ ಪತ್ತೆಗೆ ಪೊಲೀಸರು ಶೋಧಿಸುತ್ತಿದ್ದಾರೆ. ತಿಳಿ ಗುಲಾಬಿ ಬಣ್ಣದ ಪ್ಲಾಸ್ಟಿಕ್ ಬ್ಯಾಗ್‌ಗಳಲ್ಲಿ ಇಟ್ಟಿರುವ ಜಿಲೆಟಿನ್ ಕಡ್ಡಿಗಳ ಚಿತ್ರ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Related