ಖ್ಯಾತ ನಟಿ : ಕೊರೋನಾಗೆ ಬಲಿ

ಖ್ಯಾತ ನಟಿ : ಕೊರೋನಾಗೆ ಬಲಿ

ನವದೆಹಲಿ : ಕೊರೋನಾ ವೈರಸ್‌ಗೆ ತುತ್ತಾಗಿದ್ದ ಮರಾಠಿ ನಟಿ ಆಶಾಲತಾ ವಾಬ್‌ಗಾಂವ್ಕರ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅವರಿಗೆ 79 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದರಿAದ ಅವರನ್ನು ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಮುಂಜಾನೆ 4.45ಕ್ಕೆ ನಿಧನರಾಗಿದ್ದಾರೆ.

ನಂತರ ಆಶಾಲತಾ ಅವರು ಪರೀಕ್ಷೆ ಮಾಡಿಸಿಕೊಂಡಾಗ ಅವರಿಗೂ ಸೋಂಕು ದೃಢಪಟ್ಟಿತ್ತು. ಈ ಚಿತ್ರೀಕರಣದಲ್ಲಿ ಭಾಗವಹಿಸಿದ್ದ 20 ಮಂದಿಗೆ ಸೋಂಕು ತಗುಲಿತ್ತು. ಎಲ್ಲರನ್ನೂ ಸಹ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಶಾಲತಾ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Related