ಪ್ರತಿಕೃತಿ ದಹಿಸಿ, ರೈತರ ಪ್ರತಿಭಟನೆ

ಪ್ರತಿಕೃತಿ ದಹಿಸಿ, ರೈತರ ಪ್ರತಿಭಟನೆ

ವಿಜಯಪುರ : ಕರ್ನಾಟಕ ಬಂದ್ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ, ಕಾರ್ಮಿಕ ಸಂಘಟನೆಗಳಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದಲ್ಲಿ ಸಿದ್ದೇಶ್ವರ ಗುಡಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಕಾರ್ಮಿಕರು, ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿಕೃತಿ ದಹಿಸಿ, ಘೋಷಣೆ ಕೂಗಿದರು.

ಅಖಿಲ ಭಾರತ ರೈತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಚಾಲಕರ ಟ್ರೇಡ್ ಯೂನಿಯನ್, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್, ವಿಜಯಪುರ ಮರ್ಚೆಂಟ್ಸ್ ಅಸೋಸಿಯೇಷನ್, ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ, ಬೆಂಬಲ ವ್ಯಕ್ತಪಡಿಸಿದರು.

Related