ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರ ಈ ಆಡಳಿತ ಮತ್ತು ಕೃಷಿ ಇಲಾಖೆ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಸ್ವತಃ ದಾಖಲಿಸಲು “ಬೆಳೆ ಸಮೀಕ್ಷೆ ರೈತರ ಮೊಬೈಲ್ ಆಪ್ 2024-25” ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ರವರು ತಿಳಿಸಿದ್ದಾರೆ.
ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ವಿವರ ದಾಖಲಿಸಲು “ಬೆಳೆ ಸಮೀಕ್ಷೆ ರೈತರ ಮೊಬೈಲ್ ಆಪ್ 2024-25” ಎಂಬ ಮೊಬೈಲ್ ಆಪ್ ಗೂಗಲ್ ಪ್ಲೇ-ಸ್ಟೋರ್ ನಿಂದ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
http://play.google.com/store/apps/details?id+com.csk.farmer2023-24.cropsurvey ಬೆಳೆ ಸಮೀಕ್ಷೆ ಮಾಹಿತಿಯನ್ನು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ.
ಪಹಣೆಯಲ್ಲಿ ಬೆಳೆ ವಿವರ ದಾಖಲಿಸಲು, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆಗಳ ವಿಸ್ತೀರ್ಣ ವರದಿ ಕಾರ್ಯದಲ್ಲಿ, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು, ಬೆಳೆ ವಿಮೆ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು ಸರ್ವೆ ನಂಬರು ವಾರು ಬೆಳೆ ಪರಿಶೀಲನೆ ಮಾಡಲು ಸಹಕಾರಿಯಾಗಿದೆ. ಇದನ್ನೂ ಓದಿ: ದರ್ಶನ್ ಪರ ಸಚಿವ ದರ್ಶನಾಪುರ ಬ್ಯಾಟಿಂಗ್..!
ಆದ್ದರಿಂದ ಸ್ವತಃ ರೈತರೇ ತಮ್ಮ ಮೊಬೈಲ್‌ಗಳಲ್ಲಿ ಪ್ಲೇ-ಸ್ಟೋರ್‌ನಲ್ಲಿ ಡೌನ್ ಲೋಡ್ ಮಾಡಿಕೊಂಡು ಈ ಆಪ್ ಮೂಲಕ ಅಕಾಲಿಕವಾಗಿ ಎಲ್ಲಾ ಬೆಳೆಗಳ ವಿವರಗಳನ್ನು ಅಪ್‌ಲೋಡ್ ಮಾಡುವುದರಿಂದ ನ್ಯೂನತೆಗಳನ್ನು ಕಡಿಮೆ ಮಾಡಬಹುದು ಹಾಗೂ ಸೌಲಭ್ಯಗಳಿಂದ ವಂಚಿತರಾಗುವುದನ್ನು ಸಹ ತಪ್ಪಿಸಬಹುದಾಗಿದೆ. ಆದ್ದರಿಂದ ರೈತ ಬಾಂಧವರು ತಮ್ಮ ಮೊಬೈಲ್ ಆಪ್ ಬಳಸಿ ತಾವು ಬೆಳೆದಿರುವ ಬೆಳಗಳಿಗೆ ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡಿ ಬೆಳೆ ವಿವರಗಳನ್ನು ದಾಖಲಿಸಲು ಕೋರಲಾಗಿದೆ.