ರೈತರ ಸಂಕಷ್ಟಕ್ಕೆ ಬಾರದ ಸರ್ಕಾರ : ಪ್ರತಿಭಟನೆ

ರೈತರ ಸಂಕಷ್ಟಕ್ಕೆ ಬಾರದ ಸರ್ಕಾರ : ಪ್ರತಿಭಟನೆ

ರಾಯಚೂರು : ಸಂಕಷ್ಟದಲ್ಲಿರುವ ನೆರವಿಗೆ ಧಾವಿಸದ ಕೇಂದ್ರ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲು ಭಿಕ್ಷೆ ಎತ್ತುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ತೀನ್ ಕಂದಿಲ್ ಬಳಿ ಜೋಳಿಗೆ ಹಿಡಿದು ಜನರಿಂದ ಸಂಗ್ರಹಿಸಿದ ಪ್ರತಿಭಟನಾಕಾರರು, ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲಿಂದ ಪಟೇಲ್ ರಸ್ತೆ, ಚಂದ್ರಮೌಳೇಶ್ವರ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು.

ಬೆಳೆ ಹಾನಿ ಪರಿಹಾರ, ಬೆಳೆ ವಿಮೆ, ಕಿಸಾನ್ ಸಮ್ಮಾನ್ ಸೇರಿದಂತೆ ರೈತರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಸತತ ಮಳೆ, ಪ್ರವಾಹದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ಒದಗಿಸದ ಕಾರಣ ಪ್ರಧಾನಿ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಿ ನೀಡಲಾಗಿದೆ. ಸಂಘಟನೆಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Related