ಕುಸುಮಾಗೆ ಶುರುವಾಯ್ತಾ ಸೋಲಿನ ಭಯ?

ಕುಸುಮಾಗೆ ಶುರುವಾಯ್ತಾ ಸೋಲಿನ ಭಯ?

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಮತ ಎಣಿಕೆ ಆರಂಭವಾದಾಗಿನಿಂದಲೂ ಬಿಜೆಪಿ ಭಾರೀ ಮುನ್ನಡೆ ಸಾಧಿಸಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ ಸೋಲಿನ ಭಯ ಆರಂಭವಾಗಿದೆ ಎನ್ನಲಾಗಿದೆ.

ಮುನಿರತ್ನ ಅವರು ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ. ಬಹುತೇಕ ಗೆಲುವು ಖಚಿತ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕುಸುಮಾಗೆ ಭಯ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಮತಗಟ್ಟೆಗೆ ಹೋಗದೆ ಮನೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ಮತಗಟ್ಟೆಗೆ ತೆರಳುವುದಾಗಿ ತಿಳಿಸಿದ್ದರು. ಆದರೆ, ಗಂಟೆ 12 ಆಗುತ್ತಿದ್ದರು. ಇನ್ನು ಮತಗಟ್ಟೆಗೆ ಬರದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಆರ್‌ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಕೌಂಟಿಂಗ್ ಸೆಂಟರ್ ಬಳಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಮುನಿರತ್ನ ಪರ ಘೋಷಣೆ ಕೂಗಿ ಮಹಿಳಾ ಕಾರ್ಯಕರ್ತೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

Related