ಫೆ. 9ಕ್ಕೆ ಶಾಸಕರಿಗೆ ಟ್ರೈನಿಂಗ್ ಕ್ಯಾಂಪ್: ಯುಟಿ ಖಾದರ್

ಫೆ. 9ಕ್ಕೆ ಶಾಸಕರಿಗೆ ಟ್ರೈನಿಂಗ್ ಕ್ಯಾಂಪ್: ಯುಟಿ ಖಾದರ್

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇದೇ ಫೆಬ್ರುವರಿ 12 ರಿಂದ 23ರ ವರೆಗೆ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಫೆ. 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೆಯ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಆಗಿರುವ ಯುಟಿ ಖಾದರ್ ಅವರು ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 9ರಂದು ಶಾಸಕರಿಗೆ ಬಜೆಟ್​ ಬಗ್ಗೆ ತರಬೇತಿ ನೀಡುತ್ತೇವೆ. ಬಜೆಟ್ ನಲ್ಲಿ ಹೇಗೆ ಭಾಗವಹಿಸಬೇಕು ಎಂಬ ಟ್ರೈನಿಂಗ್ ಕ್ಯಾಂಪ್ ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಮಾಹಿತಿ ನೀಡಿದರು. ಫೆ. 12ರಿಂದ 23ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಮೊದಲ ದಿನ ಅಂದರೆ ಫೆಬ್ರವರಿ 12ರಂದು ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣ ಇರಲಿದೆ. ಬಳಿಕ ಫೆ.16ರಂದು ಸಿಎಂ ಸಿದ್ದರಾಮಯ್ಯ 2024-25ರ ಆಯವ್ಯಯ​ ಮಂಡನೆ ಮಾಡುತ್ತಾರೆ. ಅದಕ್ಕೂ ಮೊದಲು ಫೆಬ್ರವರಿ 9ರಂದು ಶಾಸಕರಿಗೆ ಬಜೆಟ್​ ಬಗ್ಗೆ ತರಬೇತಿ ನೀಡುತ್ತೇವೆ.

ಬಜೆಟ್ ನಲ್ಲಿ ಹೇಗೆ ಭಾಗವಹಿಸಬೇಕು ಎಂಬ ಟ್ರೈನಿಂಗ್ ಕ್ಯಾಂಪ್ ಆಯೋಜಿಸಲಾಗಿದ್ದು, ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತರಬೇತಿ ನಡೆಯಲಿದೆ. ಇನ್ನು ಒಟ್ಟು 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಡೆಯಲಿದೆ ಎಂದು ವಿವರಿಸಿದರು.

 

Related