ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ

ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ

ಅಯೋಧ್ಯೆ: ಅಯೋಧ್ಯೆಯಲ್ಲಿ ಇಂದು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು, ದೇಶದಾದ್ಯಂತ ಎಲ್ಲಾ ಹಿಂದೂ ಜನಾಂಗ ಬಹಳ ಸಡಗರ ಸಂಭ್ರಮದಿಂದ ಎಲ್ಲಾ ದೇವಾಲಯಗಳಲ್ಲೂ ಪೂಜೆ ಪುನಸ್ಕಾರಗಳನ್ನು ನೆರವೇರಿಸುತ್ತಿದ್ದಾರೆ.

ಇನ್ನು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಎಲ್ಲ ರೀತಿಯ ತಯಾರಿಗಳು ನಡೆದಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ದೇಶದ ಗಣ್ಯಾತಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಹೌದು, ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆ 11ಗಂಟೆಯಿಂದ 12ರವರೆಗೆ ರಾಮ ಮಂದಿರ ವೀಕ್ಷಣೆ, ರಾಮಜನ್ಮಭೂಮಿ ಆವರಣದಲ್ಲಿ ಪ್ರಧಾನಿ ಮೋದಿ ಸಂಚರಿಸಲಿದ್ದಾರೆ. ನಂತರ ಮಧ್ಯಾಹ್ನ 12.05ರಿಂದ 12.55ರವರೆಗೆ ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12:20 ಕ್ಕೆ ಬಾಲರಾಮನ ಕಣ್ಣಿಗೆ ಕಟ್ಟಿರುವ ಬಟ್ಟೆ ತೆಗೆಯಲಿದ್ದಾರೆ. ಕಣ್ಣಿಗೆ ಕಟ್ಟಿರುವ ಬಟ್ಟೆ ತೆರೆದ ಬಳಿಕ ಕಣ್ಣಿಗೆ ಕಾಡಿಗೆಯನ್ನು ಹಚ್ಚಲಿದ್ದಾರೆ.

ರಾಮಲಲ್ಲಾನ ಕಣ್ಣಿಗೆ ಕಾಡಿಗೆಯನ್ನು ಹಚ್ಚಿದ ಬಳಿಕ ಮಧ್ಯಾಹ್ನ 12.25ಕ್ಕೆ ರಾಮಲಲ್ಲಾನಿಗೆ ಕನ್ನಡಿಯನ್ನು ತೋರಿಸಲಿದ್ದಾರೆ. ಬಾಲರಾಮನಿಗೆ ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಪ್ರಧಾನಿ ಮೋದಿ ಮಧ್ಯಾಹ್ನ 12.55ಕ್ಕೆ ಹೆಲಿಕಾಪ್ಟರ್‌ನಿಂದ ರಾಮಮಂದಿರದ ಮೇಲೆ ಪುಷ್ಪವೃಷ್ಟಿಯನ್ನು ಮಾಡಲಿದ್ದಾರೆ.

Related