ಗಣಿಧಣಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ಒಂದಲ್ಲ ಒಂದು ಪ್ರಕರಣ ದಾಖಲಾಗುತ್ತಲೇ ಇವೆ. ಕಳೆದ ಬಾರಿ ಆಂಧ್ರಪ್ರದೇಶದ ಓಬಳಾಪುರದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ವರ್ಷ ಶಿಕ್ಷೆ ವಿಧಿಸಲಾಗಿದ್ದು, ಈ ಸಂಬಂಧ ಷರತ್ತುಬದ್ಧ ಜಾಮೀನು ಮೇಲೆ ಹೊರ ಬಂದಿರುವ ಜನಾರ್ಧನ್ ರೆಡ್ಡಿ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು, ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರು ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಸೆಂಥಿಲ್‌ ಹೇಳಿದ್ದಾರೆ. 42 ಎಸಿಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪಿಸಿಆರ್ ಫೈಲ್‌ ಮಾಡಿದ್ದು, ಸೆಪ್ಟೆಂಬರ್‌ 11ಕ್ಕೆ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹಿರಿಯರು ನಟಿಯರು ಭೇಟಿ ಮಾಡಿದ್ಯಾಕೆ?

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸೆಂಥಿಲ್‌, ಬುರುಡೆ ಕೇಸ್‌ನಲ್ಲಿ ನನ್ನ ಹೆಸರು ತಗೊಂಡಿದ್ದಾರೆ. ಆದ್ದರಿಂದ ಮೊಕದ್ದಮೆ ಹೂಡಿದ್ದೇನೆ. ಅವರು ಕೋರ್ಟ್‌ನಲ್ಲಿ ಉತ್ತರಿಸಲಿ ಎಂದು ಹೇಳಿದ್ದಾರೆ.

 

Related