ದೇವಸ್ಥಾನದ ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು : ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಸಚಿವ ಶಶಿಕಲಾ ಜೊಲ್ಲೆಯವರು ತಿಳಿಸಿದರು.
ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕರ್ನಾಟಕ ಅರ್ಚಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ.ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಕಚೇರಿಯಲ್ಲಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿ ಮನವಿ ನೀಡಿದರು.

ಈ ವೇಳೆ ಸಚಿವರು ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಒಕ್ಕೂಟದ ಸದಸ್ಯರಿಗೆ ಮುಜರಾಯಿ ಸಚಿವ ಶಶಿಕಲಾ ಜೊಲ್ಲೆ ಆದಷ್ಟು ಬೇಗ ನಿಮ್ಮ ಸಮಸ್ಯೆಯನ್ನು ಪರಿಹರಿಸುತ್ತೇನೆಂದು ಭರವಸೆ ನೀಡಿದರು.

Related