ರೈತರಲ್ಲಿ ಆತ್ಮವಿಶ್ವಾಸ ತುಂಬಿದ ಬಿ. ಸಿ. ಪಾಟೀಲ್

ರೈತರಲ್ಲಿ ಆತ್ಮವಿಶ್ವಾಸ ತುಂಬಿದ ಬಿ. ಸಿ. ಪಾಟೀಲ್

ಮೈಸೂರು : ರೈತರೊಂದಿಗೆ ಇನ್ನಷ್ಟು ಬೆರೆತು ಅವರೊಂದಿಗೆ ಕೃಷಿ ಅಭಿವೃದ್ಧಿಗೆ ಹೊಸಹೊಸ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ. ರೈತರಿಗೆ ಆತ್ಮವಿಶ್ವಾಸ ಮೂಡಿಸುವುದೇ ತಮ್ಮ ರೈತ ವಾಸ್ತವ್ಯದ ಉದ್ದೇಶ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ನುಡಿದರು.

ಮೈಸೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ರೈತ ವಾಸ್ತವ್ಯ ಈ ಹಿಂದೆಯೇ ಮಾಡಬೇಕಾಗಿತ್ತು. ಲಾಕ್ಡೌನ್ನಿಂದಾಗಿ ಸಾಧ್ಯವಾಗಲಿಲ್ಲ, ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮೂವತ್ತು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಾಗಿದೆ. ಲಾಕ್‍ಡೌನ್  ಸಂದರ್ಭದಲ್ಲಿ ಕೃಷಿಕರಿಗೆ ತೊಂದರೆ ಉಂಟಾಗಿತ್ತು. ಆದರೆ ರೈತರಿಗೆ ಲಾಕ್ಡೌನ್ನಿಂದ ವಿನಾಯಿತಿ ನೀಡಲಾಯಿತು.

ತಮ್ಮೊಂದಿಗೆ ಕೃಷಿ ಅಧಿಕಾರಿಗಳೂ ಸಹ ವಾಸ್ತವ್ಯದಲ್ಲಿ ಇರಲಿದ್ದು, ಸಾಧ್ಯವಾದಷ್ಟು ಸ್ಥಳದಲ್ಲಿಯೇ ರೈತರ ಸಮಸ್ಯೆ ಬಗೆಹರಿಸಲಾಗುವುದು. ಅಲ್ಲದೇ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿ ಪಡೆದು ಬಳಿಕವೂ ಸಮಸ್ಯೆಗಳನ್ನೂ ಬಗೆಹರಿಸಲಾಗುವುದು ಎಂದರು.

Related