ಕೊನೆಗೂ ವಿಚಾರಣೆಗೆ ಹಾಜರಾದ ಭವಾನಿ

ಕೊನೆಗೂ ವಿಚಾರಣೆಗೆ ಹಾಜರಾದ ಭವಾನಿ

ಬೆಂಗಳೂರು: ಕಳೆದ 15 ದಿನಗಳಿಂದ ತಲೆಮರಿಸಿಕೊಂಡಿದ್ದ ಭವಾನಿ ರೇವಣ್ಣ ಇದೀಗ ಎಸ್ಐಟಿ ಚಾಟಿ ಬೀಸಿದ ಬೆನ್ನೆಲೆ ಇದೀಗ ಭವಾನಿ ರೇವಣ್ಣ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು

ಹೌದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತಯರನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದೆ 15 ದಿನಗಳಿಂದ ಭವಾನಿ ರೇವಣ್ಣ ಅವರು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಆದರೆ ಈಗ ಎಸ್ಐಟಿ ಅಧಿಕಾರಿಗಳು ಚಾಟಿ ಬೀಸಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ಥೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ಶುಕ್ರವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್​ಐಟಿ ಎದುರು ಹಾಜರಾಗಿದ್ದಾರೆ. ಇದನ್ನೂ ಓದಿ: ನಿವೇದಿತಾ ಚಂದನ್‌ ಶೆಟ್ಟಿ ದಂಪತಿ ಡಿವೋರ್ಸ್‌.!

ಮೂಲಗಳ ಪ್ರಕಾರ ಭವಾನಿ ರೇವಣ್ಣ ಸಂತ್ರಸ್ಥ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದು, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ತನ್ನ ಮಗನಿಗೆ ಸಹಾಯ ಮಾಡಲು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಪ್ರಸ್ತುತ ಎಸ್‌ಐಟಿ ಕಸ್ಟಡಿಯಲ್ಲಿದ್ದಾರೆ.

 

Related