ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ: ಬಸವರಾಜ ರಾಯರೆಡ್ಡಿ

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ: ಬಸವರಾಜ ರಾಯರೆಡ್ಡಿ

ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯಿಂದ ಯಾವುದೇ ಆರ್ಥಿಕ ಪರಿಸ್ಥಿತಿಗೆ ತೊಂದರೆಯಾಗಿಲ್ಲ. ನಾವು ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲವೆಂದು ಕಾಂಗ್ರೆಸ್ನ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯಕ್ಕೆ ಯಾವುದೇ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ ಹಾಗಾಗಿ ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಷ್ಟೇ ಕಷ್ಟ ಬಂದರೂ ಕೂಡ ನಮ್ಮ ಐದು ಗ್ಯಾರಂಟಿಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ರಾಜ್ಯದಲ್ಲಿ6.90 ಕೋಟಿ ಜನರಿಗೆ ₹1 ಲಕ್ಷ ಕೋಟಿ ನೀಡುತ್ತಿದ್ದೇವೆ. 7.10 ಲಕ್ಷ ನೌಕರರಿಗೆ ಸರಿಸುಮಾರು ₹96 ಲಕ್ಷ ಕೋಟಿ ನೀಡಲಾಗುತ್ತದೆ. ಹೀಗಿರುವಾಗ ಜನರಿಗೆ ಗ್ಯಾರಂಟಿ ಯೋಜನೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ; ಮುಂದುವರಿಸುತ್ತೇವೆ ಎಂದರು.

ನಾವು ಗ್ಯಾರಂಟಿ ಬಂದ್ ಮಾಡಿದರೆ ಜನ ಸುಮ್ಮನಿರುತ್ತಾರಾ? ಕೊಟ್ಟಿದ್ದನ್ನು ನಿಲ್ಲಿಸಲು ಆಗುವುದಿಲ್ಲ, ಗ್ಯಾರಂಟಿಯಿಂದ ಹಣದ ಭಾರವಿದೆ, ಆದರೆ ಅದಕ್ಕೆ ಪರಿಹಾರ ಹುಡುಕಿಕೊಂಡಿದ್ದೇವೆ ಎಂದರು.

 

Related