ಬಿಜೆಪಿ ಕಾರ್ಯಕರ್ತನ ವಿರುದ್ಧ ಎಫ್ ಐಆರ್..!

ಬಿಜೆಪಿ  ಕಾರ್ಯಕರ್ತನ ವಿರುದ್ಧ ಎಫ್ ಐಆರ್..!

ಉತ್ತರ ಪ್ರದೇಶದ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ನಡೆಸಿದ್ದ ಬಿಜೆಪಿ ನಾಯಕ ಶ್ರೀಕಾಂತ್ತ್ಯಾಗಿ ವಿರುದ್ಧ ಎಫ್ಐಆರ್ ದಾಖಲಿಸಿ ಅವರನ್ನು ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯು) ಶನಿವಾರ ಹೇಳಿದೆ. ಆದರೆ ಆರೋಪಿಯು ಪರಾರಿಯಾಗಿದ್ದು, ಆತನ ಪತ್ತೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯು ನೋಯ್ಡಾದ ಗ್ರ್ಯಾಂಡ್ ಒಮ್ಯಾಕ್ಸ್ ಸೊಸೈಟಿ ಸೆಕ್ಟರ್ 93B ಅಪಾರ್ಟ್ಮೆಂಟ್ನಲ್ಲಿ ನಡೆದಿತ್ತು.

ಎನ್ಸಿಡಬ್ಲ್ಯೂ ಅಧ್ಯಕ್ಷೆ ರೇಖಾ ಶರ್ಮಾ ಅವರು ಉತ್ತರ ಪ್ರದೇಶ ಡಿಜಿಪಿಗೆ ಪತ್ರ ಬರೆದು ಘಟನೆಯ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದ್ದು, ದುಷ್ಕರ್ಮಿಯ ವಿರುದ್ಧ ಎಫ್ಐಆರ್ ದಾಖಲಿಸಿ ಅವನನ್ನು ಬಂಧಿಸುವಂತೆ ಕೋರಿದ್ದಾರೆ.

ಅಪಾರ್ಟ್ಮೆಂಟ್ನ ಕಾಮನ್ ಏರಿಯಾ ಜಾಗವನ್ನು ಶ್ರಿಕಾಂತ್ ತ್ಯಾಗಿ ಅತಿಕ್ರಮಣ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಈ ಕುರಿತು ಅಪಾರ್ಟ್ಮೆಂಟ್ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಶ್ರೀಕಾಂತ್ ತ್ಯಾಗಿ ಬಳಿ ಚರ್ಚೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ಶಬ್ದಗಳಿಂದ ಮಹಿಳೆಯನ್ನು ನಿಂದಿಸಿ ಹಲ್ಲೆ ನಡೆಸಿದ್ದನು. ದುಷ್ಕರ್ಮಿಯ ಶ್ರೀಕಾಂತ್ ತ್ಯಾಗಿ ವಿರುದ್ಧ ನೋಯ್ಡಾ ಪೊಲೀಸರು ಶುಕ್ರವಾರ ಆಗಸ್ಟ್ 5 ರಂದು ಮೊಕದ್ದಮೆ ದಾಖಲಿಸಿದ್ದಾರೆ.

Related