ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್

ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್

ಮೈಸೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ನಿಮಗೆ ದಮ್ಮು ತಾಕತ್ತು ಇದ್ರೆ ನೀವು ಅಭಿವೃದ್ಧಿಯ ರಾಜಕೀಯ ಮಾಡಿ ಎಂದು ಮೈಸೂರು ಮತ್ತು ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಓಪನ್ ಸವಾಲ್ ಹಾಕಿದ್ದರು.

ಈ ಸಂಬಂಧ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಇಂದು ಎಫ್ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504, 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ನಿನ್ನೆ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡುತ್ತಾ ಸೋಮಾರಿ ಸಿದ್ದ ಎಂದು ಹೇಳಿಕೆ ನೀಡಿದ್ದರು. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

ಅಲ್ಲದೆ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು‌ ಸಹ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್​ ಕಾರ್ಯಕರ್ತರು, ನಿನ್ನೆ ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಪೊಲೀಸರು ಎಫ್​ಐಆರ್ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂತೆಗೆದುಕೊಂಡರು.

 

Related