ಲುಲು ಮಾಲ್ ನಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್ ಐಆರ್..!

  • In State
  • July 16, 2022
  • 190 Views
ಲುಲು ಮಾಲ್ ನಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್ ಐಆರ್..!

ಲಕ್ನೋದಲ್ಲಿ ಹೊಸದಾಗಿ ತೆರೆಯಲಾದ ಲುಲು ಮಾಲ್ನಲ್ಲಿ ಕೆಲವು ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೊ ವೈರಲ್ ಆದ ಕುರಿತು ಹಿಂದುತ್ವ ಸಂಘಟನೆಯಾದ ಅಖಿಲ ಭಾರತೀಯ ಹಿಂದೂ ಮಹಾಸಭಾ ಪ್ರತಿಭಟನೆ ನಡೆಸಿದ ಬಳಿಕ, ಉತ್ತರ ಪ್ರದೇಶ ಪೊಲೀಸರು ನಮಾಜ್ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ದಾಖಲಿಸಿದ್ದಾರೆ. ‘ಧಾರ್ಮಿಕ ಗುಂಪುಗಳ ನಡುವಿನ ದ್ವೇಷ ಬೆಳೆಸುವ ಯತ್ನ’ ಆರೋಪವನ್ನು ಹೊರಿಸಲಾಗಿದೆ.

ಮಾಲ್ನ ಅಂಗಳದಲ್ಲಿ ನಮಾಜ್ ಮಾಡಲು ಅವಕಾಶ ನೀಡಲಾಗಿದೆ ಎಂದು ಲುಲು ಗ್ರೂಪ್ ಮತ್ತು ಅದರ ಮಾಲೀಕ ಯೂಸುಫಲಿ ಎಂ.ಎ. ವಿರುದ್ಧ ಹಿಂದೂ ಮಹಾಸಭಾ ಲಕ್ನೋದಲ್ಲಿ ಪ್ರತಿಭಟನೆ ಆರಂಭಿಸಿದೆ. ಮಾಲ್ನ ಆಡಳಿತ ಮಂಡಳಿ ಹಾಗೂ ವಿಡಿಯೊದಲ್ಲಿ ಸೆರೆಯಾಗಿರುವ ಜನರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಕಾರ್ಯಕರ್ತರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಇದಾಗ ಬಳಿಕ ಮಾಲ್ನ ಅಧಿಕಾರಿಗಳು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ವಿವಾದದಿಂದ ಅಂತರ ಕಾಯ್ದುಕೊಳ್ಳುವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಲ್ ಆಡಳಿತವು ಸುಶಾಂತ್ ಗಾಲ್ಫ್ ಸಿಟಿ ಪೊಲೀಸರಿಗೆ ಪತ್ರವನ್ನೂ ಕಳುಹಿಸಿದೆ. “ನಮಾಜ್ ಮಾಡಿರುವವರು ಮಾಲ್ನ ಉದ್ಯೋಗಿಗಳಲ್ಲ.

ಮಾಲ್ಗೆ ಭೇಟಿ ನೀಡಿದವರು ನಮಾಜ್ಮಾಡಿದ್ದಾರೆ” ಎಂದು ಆಡಳಿತ ವಿಭಾಗ ಸ್ಪಷ್ಟಪಡಿಸಿದೆ. “ಅಂತಹ ಯಾವುದೇ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ. ಮಾಲ್ನಲ್ಲಿ ಯಾವುದೇ ಧಾರ್ಮಿಕ ಪ್ರಾರ್ಥನೆಗೆ ಅವಕಾಶ ನೀಡುವುದಿಲ್ಲ” ಎಂದು ಆಡಳಿತ ಮಂಡಳಿ ಪ್ರತಿಕ್ರಿಯೆ ನೀಡಿದೆ.

Related