ರಣವೀರ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲು..!

  • In Crime
  • July 27, 2022
  • 258 Views
ರಣವೀರ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲು..!

ಸಂಪೂರ್ಣ ಬೆತ್ತಲಾಗಿ ಫೋಟೊಶೂಟ್ ಮಾಡಿಸಿದ್ದ ನಟ ರಣವೀರ್ ಸಿಂಗ್, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಇದೀಗ ದೂರಿನ ಆಧಾರದ ಮೇಲೆ ಅವರ ವಿರುದ್ಧ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಮುಂಬೈ, ಜು 27 : ಬಾಲಿವುಡ್ ನಟ ಹಾಗೂ ನಟಿ ದೀಪಿಕಾ ಪಡುಕೋಣೆ ಅವರ ಪತಿ ರಣವೀರ್ ಸಿಂಗ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗ್ನ ಫೋಟೊಶೂಟ್ ಮಾಡಿಸಿ, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಇದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಈ ಸಂಬಂಧ ಮುಂಬೈ ಪೊಲೀಸರು ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ ಮೂಲದ ಎನ್ಜಿಒ ನಟನ ವಿರುದ್ಧ ಇಲ್ಲಿನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ದೂರಿನ ಆಧಾರದ ಮೇಲೆ ಪೊಲೀಸರು, ರಣವೀರ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳಾದ 292 293, 509 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಚೆಂಬೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Related