ಮಾಲ್‍ನಲ್ಲಿ ಬೆಂಕಿ ಅವಘಡ

ಮಾಲ್‍ನಲ್ಲಿ ಬೆಂಕಿ ಅವಘಡ

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್‍ನಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 3,500 ಜನರನ್ನು ರಕ್ಷಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ 20 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಆರಂಭಿಸಿವೆ. ಬೆಂಕಿಯು 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಈ ಕಾರ್ಯಾಚರಣೆ ವೇಳೆ ಓರ್ವ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆಂದು ತಿಳಿದುಬಂದಿದೆ. ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.

Related