ಗುಂಡಿನ ದಾಳಿ..!

 ಗುಂಡಿನ ದಾಳಿ..!

ನವದೆಹಲಿ, ಫೆ.12 : ಎಎಪಿ ಶಾಸಕರು ಸಂಚರಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು 7 ಸುತ್ತು ಗುಂಡು ಹಾರಿಸಿದ್ದಾರೆ. ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದ್ದು, ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ದೆಹಲಿಯಲ್ಲಿ ಎಎಪಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಸಂಭ್ರಮಾಚರಣೆಯಲ್ಲಿರುವಾಗಲೇ ಅಹಿತಕರ ಘಟನೆಯೊಂದು ನಡೆದಿದೆ.

ಗುಂಡಿನ ದಾಳಿ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Related