ಇಂದು ಸಿದ್ದು ನೇತೃತ್ವದಲ್ಲಿ ಮೊದಲ ಸಂಪುಟ ಸಭೆ: 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ

ಇಂದು ಸಿದ್ದು ನೇತೃತ್ವದಲ್ಲಿ ಮೊದಲ ಸಂಪುಟ ಸಭೆ: 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಯಾಗಿ ಇಂದು ಶನಿವಾರ ಮೇ 20ರಂದು ಪ್ರಮಾಣವಚನ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಇಂದು ಮೊದಲ ಸಂಪುಟ ಸಭೆ ನಡೆಯಲಿದ್ದು ಈ ಸಂಪುಟ ಸಭೆಯಲ್ಲಿ ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಶನಿವಾರದಿಂದ ರಾಜ್ಯದಲ್ಲಿ ಹೊಸ ಸರ್ಕಾರ ಆಡಳಿತ ನಡೆಸಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಲಿದೆ.

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈ ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ ಮಾಡುವುದಾಗಿ ಹೇಳಿದ್ದರು. ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ರೂ. 2,000 ನೀಡುವ ಗೃಹಲಕ್ಷ್ಮಿ ಯೋಜನೆ, ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಪದವಿಧರರಿಗೆ ರೂ.3,000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500 ನೀಡುವ ಯುವನಿಧಿ ಯೋಜನೆ, ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ ಹಾಗೂ ಬಿಪಿಎಲ್ ಕಾರ್ಡ್​ದಾರರಿಗೆ 10 ಕೆ.ಜಿ. ಅನ್ನಭಾಗ್ಯ ಯೋಜನೆಯ ಒಟ್ಟು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಂಪುಟ ಸಭೆಯು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

 

Related