ಭೀಕರ ರಸ್ತೆ ಅಪಘಾತ: ಐವರು ಸಾವು

ಭೀಕರ ರಸ್ತೆ ಅಪಘಾತ: ಐವರು ಸಾವು

ಯಲಬುರ್ಗಾ : ಕುಕನೂರು ತಾಲ್ಲೂಕಿನ ನಿಟ್ಟಾಲಿ ಕ್ರಾಸ್ ಬಳಿ ಟೆಂಪೊ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸಾವಿಗೀಡಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. ತಾಲ್ಲೂಕಿನ ಹಿರೇಸಿಂದೋಗಿ ಗ್ರಾಮಕ್ಕೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅಗಸನಕೊಪ್ಪ ಗ್ರಾಮದಿಂದ ತೆರಳುತ್ತಿದ್ದ ಟೆಂಪೊದಲ್ಲಿ 22 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.  ನಿಟ್ಟಾಲಿ ಬಳಿ ವೇಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಅಪಘಾತದಿಂದ ತಪ್ಪಿಸುವ ಉದ್ದೇಶದಿಂದ ಟೆಂಪೊ ರಸ್ತೆ ಪಕ್ಕಕ್ಕೆ ನುಗ್ಗಿದೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಂತೋಷ ಎಂಬುವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಶ್ರೀಧರ್, ಡಿವೈಎಸ್ಪಿ ವೆಂಕಟಪ್ಪ ನಾಯಕ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಮೃತರಾದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related