ಆ.4 ರಿಂದ ಲಾಲ್ ಬಾಗ್​ನಲ್ಲಿ ಫ್ಲವರ್ ಶೋ ಪ್ರಾರಂಭ

ಆ.4 ರಿಂದ ಲಾಲ್ ಬಾಗ್​ನಲ್ಲಿ ಫ್ಲವರ್ ಶೋ ಪ್ರಾರಂಭ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮೊದಲು ನೆನಪಾಗುವುದು ಲಾಲ್ ಬಾಗ್. ಹೌದು ಲಾಲ್ ಬಾಗ್​ನಲ್ಲಿ 214ನೆಯ ಪವರ್ ಶೋ ಇದೇ ಆಗಸ್ಟ್ ನಾಲಕ್ಕರಿಂದ ಪ್ರಾರಂಭವಾಗಲಿದ್ದು ಸಂಜೆ 6:00ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ.

ರಾಜ್ಯದಲ್ಲಿ 76ನೇಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆಯೋಜಿಸಲಾಗಿರುವ 214ನೇ ಫ್ಲವರ್ ಶೋ ನಾಳೆಯಿಂದ ಆರಂಭವಾಗಲಿದೆ. ಇನ್ನುಆ.4ರಿಂದ ಶುರುವಾಗಿ ಆಗಸ್ಟ್ 15ರ ವರೆಗೆ ಫ್ಲವರ್ ಶೋ ನಡೆಯಲಿದೆ.

ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ. ಇನ್ನು ಬರೋಬ್ಬರಿ 2 ಕೋಟಿ ಖರ್ಚುಮಾಡುತ್ತಿದ್ದು, 69 ಬಗೆಯ ಹೂಗಳು ಈ ಬಾರಿ ಫ್ಲವರ್ ಶೋ ಅಂದವನ್ನ ಹೆಚ್ಚಿಸಲಿವೆ. ಈ ವರ್ಷ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ.

 

Related