ಅನುಮಾನಸ್ಪದ ಸಾವಿನ ಕುರಿತು ತನಿಖೆಗೆ ಒತ್ತಾಯ

ಅನುಮಾನಸ್ಪದ ಸಾವಿನ ಕುರಿತು ತನಿಖೆಗೆ ಒತ್ತಾಯ

ಶಹಾಪುರ : ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಜಂಬಗಿ ಗ್ರಾ.ಪಂ ಪಿಡಿಓ ರಮೇಶ ಲೋಹಾರ ಕಳೆದ ಐದಾರೂ ದಿನಗಳಿಂದ ನಾಪತ್ತೆಯಾಗಿದ್ದರು. ಸೋಮವಾರರಂದು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ತೆಲಂಗಾಣದಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತು ತನಿಖೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರಾಯಪ್ಪಗೌಡ ಹುಡೇದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ಉನ್ನತ ಮಟ್ಟದ ವಿಶೇಷ ತಂಡವನ್ನು ರಚನೆ ಮಾಡಿ ಸಾವಿನ ಹಿಂದಿನ ಕಾರಣವನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಜರುಗಿಸಬೇಕು. ರಾಜ್ಯದಲ್ಲಿ ದಿನೇ ದಿನೇ ಸರ್ಕಾರಿ ನೌಕರರ ಮೇಲೆ ಮತ್ತು ವಿಶೇಷವಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಮತ್ತು ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಹಲ್ಲೇ, ದೌರ್ಜನ್ಯ ದಬ್ಬಾಳಿಕೆಗಳು ನಿರಂತರವಾಗಿ ನಡೆಯುತ್ತಿವೆ. ಹೀಗಾಗಿ ಸರ್ಕಾರಿ ನೌಕರರ ರಕ್ಷಣೆಗಾಗಿ ಅಗತ್ಯ ಕಾನೂನು ರೂಪಿಸಬೇಕು. ಹಾಗೂ ಕೋಲಾರ ಜಿಲ್ಲೆಯ ಲೋಕಸಭಾ ಸದಸ್ಯ ಮುನಿಸ್ವಾಮಿ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿವಾಸ ರೆಡ್ಡಿ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿರುಸುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನಾಚಿಕೆಗೇಡು ಸಂಗತಿಯಾಗಿದೆ.

ಲೋಕಸಭಾ ಸದಸ್ಯರು ಕೂಡಲೇ ಕ್ಷಮೆಯಾಚಿಸಬೇಕು ವಿಳಂಬವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಮನಗೌಡ ಖಾನಾಪುರ, ಭೀಮನಗೌಡ ಬಿರಾದಾರ, ಗೋಪಾಲ ಬೊಜಾಸ್ಪುರ್, ಮಲ್ಲಣ್ಣ ಮಾಳೂರ, ಮೌನೇಶ್ವರ ವಿಶ್ವಕರ್ಮ, ಹನುಮಪ್ಪ ದೇವರಮನಿ ಸೇರಿದಂತೆ ನೌಕರರು ಇದ್ದರು.

Related