ಅರಣ್ಯಾಧಿಕಾರಿ : ಸಿಎಂ ಚಿನ್ನದ ಪದಕಕ್ಕೆ ಆಯ್ಕೆ

ಅರಣ್ಯಾಧಿಕಾರಿ : ಸಿಎಂ ಚಿನ್ನದ ಪದಕಕ್ಕೆ ಆಯ್ಕೆ

ಮುದ್ದೇಬಿಹಾಳ : ಸಾಮಾಜಿಕ ವಲಯ ಅರಣ್ಯಾಧಿಕಾರಿ ಸಂತೋಷ ಅಜೂರ್ ಅವರನ್ನು 2017ರ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಬೆಳಗಾವಿ ಪ್ರಾದೇಶಿಕ ವೃತ್ತದಲ್ಲಿ ಅರಣ್ಯ ಸಂರಕ್ಷಣೆಯ ನೆಡುತೋಪು ವಿಭಾಗದಲ್ಲಿ ಅಧಿಕಾರಿ ಅಜೂರ್ ಅವರನ್ನು ಸಿಎಂ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಎಂದು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ವಿ. ಶ್ರೀನಿವಾಸನ್ ತಿಳಿಸಿದ್ದಾರೆ.

ಅರಣ್ಯ ಸಂರಕ್ಷಣೆ, ಅಕ್ರಮ ಕಡಿತೆ ತಡೆಗಟ್ಟುವಿಕೆ ವನ್ಯಜೀವಿ ಸಂರಕ್ಷಣೆ, ಅರಣ್ಯ ಪ್ರದೇಶವನ್ನು ಒತ್ತುವರಿದಾರರಿಂದ ತೆರವುಗೊಳಿಸುವುದು ಸೇರಿದಂತೆ ಹಲವು ವಿಭಾಗಗಳಲ್ಲಿ ರಾಜ್ಯದ ಇಪ್ಪತೈದು ಜನರನ್ನು ಸಿಎಂ ಚಿನ್ನದ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಈ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿದ ಅಧಿಕಾರಿಗಳು, ನೌಕರರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಬಂದಿದ್ದು ಸಂತಸವಾಗಿದೆ ಇಡೀ ಇಲಾಖೆಯ ಎಲ್ಲ ಸಿಬ್ಬಂದಿ, ಸಹೋದ್ಯೋಗಿಗಳಿಗೆ ಸಲ್ಲಬೇಕು. ಟೀಂ ವರ್ಕ ಮಾಡಿದ್ದರಿಂದಲೇ ಇಂದು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ.ಇಲಾಖೆಯ ಹಿರಿಯ ಅಧಿಕಾರಿಗಳು ಮೇಲಾಧಿಕಾರಿಗಳ ಮಾರ್ಗದರ್ಶನ ಪ್ರೋತ್ಸಾಹದಿಂದ ಈ ಪ್ರಶಸ್ತಿ ಬಂದಿದ್ದು ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ. ಅರಣ್ಯ ಇಲಾಖೆಯವರೆ ಗಿಡ ನೆಡಲಿ ಎಂಬ ಮನೋಭಾವ ಹೊಂದದೇ ಗಿಡಗಳನ್ನು ಮಕ್ಕಳಂತೆ ಪ್ರೀತಿಸಿದರೆ ಪರಿಸರದ ಉಳಿವಿನಿಂದ ಜೀವಸಂಕುಲದ ಉಳಿವು ಆಗುತ್ತದೆ. ಸಂತೋಷ ಅಜೂರ್, ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಆಯ್ಕೆಯಾದ ಅರಣ್ಯಾಧಿಕಾರಿ

Related