ʼಕೈʼ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕಿ

ʼಕೈʼ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಜೋರಾಗಿಯೇ ನಡೆಯುತ್ತಿದ್ದು ಇಂದು ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾದ್ದಾರೆ.

ಕಳೆದ ವಾರವಷ್ಟೇ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೀಗ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೂಡ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಬಾವುಟ ಹಿಡಿದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಅಧ್ಯಕ್ಷರು ತಮ್ಮ ಮಾತಿನಲ್ಲಿ ಬಹಳ ದಿನಗಳಿಂದ ಗಾಳ ಹಾಕ್ತಿದ್ದೆ ಎಂದು ಹೇಳಿದರು. ಕೆಲವು ಕಹಿ ಘಟನೆಗಳಿಂದ ನಮ್ಮ ತಂದೆ ಕಾಂಗ್ರೆಸ್ ಬಿಟ್ಟಿದ್ದರು. ಕೊಟ್ಟ ಮಾತಿನಂತೆ ಸರ್ಕಾರದ ನಾಯಕರು ನಡೆಯುತ್ತಿದ್ದಾರೆ. ಸಿದ್ದಾಂತ ನಂಬಿ ಬಂದಿರುವೆ, ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ನನ್ನ ತಂದೆ ಹೇಳಿದ್ರು. ಬಹಳಷ್ಟು ಬಾರಿ ನನ್ನ ತಂದೆ ರಾಜಕೀಯ ವಿಚಾರ ಚರ್ಚೆ ಮಾತಾಡ್ತಿದ್ರು. ತಮ್ಮ ಜೊತೆ ಬಂದ ಬೆಂಬಲಿಗರಿಗೆ ಧನ್ಯವಾದಗಳನ್ನು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವ ಡಿ.ಸುಧಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಗೊಲ್ಲ ಸಮುದಾಯದ ರಾಜ್ಯ ಮುಖಂಡರೂ , ವಿಧಾನ‌ ಪರಿಷತ್ ಸದಸ್ಯರೂ ಆದ ನಾಗರಾಜ ಯಾದವ್ ಸೇರಿದಂತೆ ಹಲವು ಮಂದಿ ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related