ಮಾಜಿ ಸಿಎಂ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಇಂದು (ಸೋಮವಾರ ಏಪ್ರಿಲ್ 29) ರಂದು ಬೆಂಗಳೂರು ನಗರದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಅವರ ಆರೋಗ್ಯದಲ್ಲಿ ಸ್ಥಿರವಾಗಿದ್ದು ಇನ್ನೂ ಕೆಲವು ದಿನಗಳು ಚಿಕಿತ್ಸೆ ಮುಂದುವರಿಸಲಾಗುವುದು ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರ ಮಾಹಿತಿ ನೀಡಿದ್ದಾರೆ.

ಮೊನ್ನೆ ಅಂದ್ರೆ ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಇಂದು (ಏಪ್ರಿಲ್ 29) ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.

 

Related