ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಿಎಂ

ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಿಎಂ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ, ನಿರ್ದೇಶಕರಾಗಿರುವಂತಹ ದ್ವಾರಕೀಶ್ ಅವರ ನಿಧನಕ್ಕೆ ಇಡೀ ಕರ್ನಾಟಕ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ದ್ವಾರಕೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ‌. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ.

ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

Related