ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ

ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ

ನವದೆಹಲಿ, ಮಾ. 09 : ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ವಿಧಿವಶರಾಗಿದ್ದಾರೆ.
82 ವರ್ಷದ ಹಂಸರಾಜ್ ಭಾರದ್ವಾಜ್ ಅವರು ಕೇಂದ್ರ ಕಾನೂನು ಸಚಿವರಾಗಿ ಕೆಲಸ ಮಾಡಿದ್ದರು. ಇನ್ನು 2009ರಿಂದ 14ರ ಅವಧಿಗೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.
ಅನಾರೋಗ್ಯದಿಂದಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನವದೆಹಲಿಯ ನಿಗಮ ಬೋದ್ ಘಾಟ್ ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಗಣ್ಯರ ಸಂತಾಪ : ಮಾಜಿ ಕೇಂದ್ರ ಸಚಿವ ಹಂಸರಾಜ್ ಭಾರದ್ವಾಜ್ ನಿಧನ ದೂಃಖ ತಂದಿದೆ. ಅವರ ಕುಟುಂಬ ಮತ್ತು ಹಿತೈಷಿಗಳ ಶೋಕದ ಕ್ಷಣದಲ್ಲಿ ನಾನೂ ಭಾಗಿಯಾಗುವೆ. ಓಂ ಶಾಂತಿ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಯಡಿಯೂರಪ್ಪ ಮಾಜಿ ರಾಜ್ಯಪಾಲರ ನಿಧನಕ್ಕೆ ಸಂತಾಪ ಸೂಚಿಸಿದ್ದು ಕರ್ನಾಟಕದ ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಕಾನೂನು ಸಚಿವ ಹಂಸರಾಜ್ ಭಾರದ್ವಾಜ್ ಅವರ ನಿಧನದ ಸುದ್ದಿ ದುಃಖಕರ. ಅವರ ನಿಧನದಿಂದ ಉತ್ತಮ ಕಾನೂನು ತಜ್ಞ, ಆಡಳಿತಗಾರರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ, ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕರ್ನಾಟಕದ ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಕಾನೂನು ಸಚಿವ ಹಂಸರಾಜ್ ಭಾರದ್ವಾಜ್ ಅವರ ನಿಧನದ ಸುದ್ದಿ ದುಃಖಕರ. ಅವರ ನಿಧನದಿಂದ ಉತ್ತಮ ಕಾನೂನು ತಜ್ಞ, ಆಡಳಿತಗಾರರೊಬ್ಬರನ್ನು ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ, ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ನಾನು ಕಾನೂನು ಸಚಿವನಾಗಿ ಕಾರ್ಯ ನಿರ್ವಹಿಸಿದಾಗ ರಾಜ್ಯಪಾಲರಾಗಿದ್ದ ಶ್ರೀ ಭಾರದ್ವಾಜ್ ರವರನ್ನು ಸಾಕಷ್ಟು ಬಾರಿ ಭೇಟಿ ಮಾಡುವ ಅವಕಾಶಗಳು ಸಿಕ್ಕಿದ್ದವು. ಅವರು ಬಹಳ ಓದಿಕೊಂಡಿದ್ದರು. ಕೇಂದ್ರದಲ್ಲಿ ಕಾನೂನು ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು. ನಮ್ಮ ಸರ್ಕಾರದ ಜೊತೆ ಎಂದೂ ಸಹಮಧುರ ಸಂಬಂಧವಿರಲಿಲ್ಲ.ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಟ್ವೀಟ್ ಮಾಡಿದ್ದಾರೆ. ಭಾರತದ ಕಾನೂನು ಸಚಿವರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಹಂಸರಾಜ್ ಭಾರದ್ವಾಜ್ ಅವರ ನಿಧನಕ್ಕಾಗಿ ತೀವ್ರ ಸಂತಾಪ ಸೂಚಿಸುತ್ತೇನೆ.

Related