ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಬಿಜೆಪಿಗೆ ಸೇರ್ಪಡೆ

ಸಿಂಧನೂರ : ಮಾಜಿ ಸಂಸದ, ಕುರುಬ ಸಮಾಜದ ಎಸ್‌ಟಿ ಹೋರಾಟದ ರಾಜ್ಯಾಧ್ಯಕ್ಷ ಕೆ.ವಿರೂಪಾಕ್ಷಪ್ಪ ಮಂಗಳವಾರ ಬೆಳಗ್ಗೆ ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಮುಖ್ಯಮಂತ್ರಿ ಸೇರಿದಂತೆ ಪಕ್ಷದ ಮುಖಂಡರು, ಕೆ.ವಿರೂಪಾಕ್ಷಪ್ಪ ಅವರಿಗೆ ಬಿಜೆಪಿ ಶಾಲು ಹಾಕಿ, ಬಾವುಟ ನೀಡಿ ಸ್ವಾಗತಿಸಿ, ಸೇರ್ಪಡೆ ಮಾಡಿಕೊಂಡರು.
ನಂತರ ಮುಖ್ಯಮಂತ್ರಿ ಬಿಎಸ್‌ವೈ ಮಾತನಾಡಿ, ವಿರೂಪಾಕ್ಷಪ್ಪ ಮೊದಲು ಬಿಜೆಪಿಯಲ್ಲಿ ಇದ್ದವರು. ಬೇರೆ ಬೇರೆ ಕಾರಣಗಳಿಂದ ಪಕ್ಷ ಬಿಟ್ಟು ದೂರ ಹೋಗಿದ್ದರು. ಅವರ ಸೇರ್ಪಡೆಯಿಂದ ರಾಯಚೂರು ಸೇರಿದಂತೆ ನಾಲ್ಕೆöÊದು ಜಿಲ್ಲೆಗಳಲ್ಲಿ ಬಿಜೆಪಿಗೆ ಆನೆ ಬಲ ಬಂದಿದೆ. ಉಪಚುನಾವಣೆ ಸಂದರ್ಭದಲ್ಲಿ ವಿರೂಪಾಕ್ಷಪ್ಪ ಬಿಜೆಪಿ ಸೇರಿರುವುದು ಪಕ್ಷಕ್ಕೆ ಇನ್ನಷ್ಟು ಶಕ್ತಿ ಬಂದಂತಾಗಿದೆ ಎಂದರು.

ಸಚಿವ ಕೆ.ಎಸ್.ಈಶ್ವರಪ್ಪ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವೈ.ವಿಜಯೇಂದ್ರ, ಎಂಎಲ್‌ಸಿ ರವಿಕುಮಾರ, ಶಾಸಕರಾದ ರಾಜುಗೌಡ, ಬಸವರಾಜ ದಢೇಸೂಗುರು, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ್, ಮಾನಪ್ಪ ವಜ್ಜಲ್, ದೊಡ್ಡನಗೌಡ ಕುಷ್ಟಗಿ, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೊಲ್ಲಾ ಶೇಷಗಿರಿರಾವ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ, ಬಿಜೆಪಿ ತಾಲೂಕಾಧ್ಯಕ್ಷ ಟಿ.ಹನುಮೇಶ ಸಾಲಗುಂದಾ ಸೇರಿದಂತೆ ಬಿಜೆಪಿಯ ಪ್ರಮುಖರು ಭಾಗವಹಿಸಿದ್ದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪರೊಂದಿಗೆ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಮುಖಂಡರಾದ ವೆಂಕಟೇಶ ಉಪ್ಪಾರ, ಹಂಸರಾಜ್ ಮಾಡಶಿರವಾರ, ನಾಗೋಜಿ ಮರಾಠ, ಸುರೇಶ ಹಚ್ಚೊಳ್ಳಿ, ಶಂಭಣ್ಣ ಸೇರಿದಂತೆ ಇನ್ನಿತರರು ಬಿಜೆಪಿ ಸೇರ್ಪಡೆಗೊಂಡರು.

Related