92ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ

92ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ

ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್ ದೇವೇಗೌಡ ಅವರಿಗೆ 92 ಎರಡನೇ ಹುಟ್ಟುಹಬ್ಬದ ಸಂಭ್ರಮ.

ಇನ್ನು ದೇವೇಗೌಡ ಅವರ ಹುಟ್ಟು ಹಬ್ಬದ ಸಂಭ್ರಮಕ್ಕೆ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಗಣ್ಯಾತಿ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಎಚ್ ಡಿ ದೇವೇಗೌಡರಿಗೆ ಶುಭಕೋರಿದ್ದಾರೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಈ ಬಾರಿ ಯಾವುದೇ ರೀತಿ ಹುಟ್ಟು ಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿಲ್ಲ ಆದ್ದರಿಂದ ಎಚ್ ಡಿ ದೇವೇಗೌಡ ಅವರ ಅಭಿಮಾನಿಗಳು ದೇವೇಗೌಡ ಅವರು ಇರುವ ಸ್ಥಳಕ್ಕೆ ಭೇಟಿ ನೀಡಿ ಶುಭ ಕೋರುತ್ತಿದ್ದಾರೆ.

ಪ್ರಧಾನಿ ಮೋದಿ ಅವರು ಜೆಡಿಎಸ್ ವರಿಷ್ಠ ಎಚ್‌. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಹೆಚ್.ಡಿ.ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.

Related