ಗಲಾಟೆ ನಡೆಸಿದ ರೈತರ ವಿರುದ್ಧ ನಾಲ್ಕು ಎಫ್‌ಐಆರ್‌ ದಾಖಲು

ಗಲಾಟೆ ನಡೆಸಿದ ರೈತರ ವಿರುದ್ಧ ನಾಲ್ಕು ಎಫ್‌ಐಆರ್‌ ದಾಖಲು

ಬ್ಯಾಡಗಿ: ಬ್ಯಾಡಗಿ ಎಪಿಎಂಸಿಯಲ್ಲಿ ರೈತರ ಪ್ರತಿಭಟನೆ ವೇಳೆ ಕಳ್ಳರು ಲಾಭ ಮಾಡಿಕೊಂಡಿದ್ದು, ಕೆಲ ಅಂಗಡಿಗಳಿಗೆ ನುಗ್ಗಿ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣ ದೋಚಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು 4 ಎಫ್‌ಐಆರ್ ದಾಖಲು ಮಾಡಿಕೊಂಡಿದ್ದು, 81 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಬ್ಯಾಡಗಿ ಮೆಣಸಿನಕಾಯಿ ಬೆಲೆ ದಿಢೀರ್ ಕುಸಿತದಿಂದ ಹಾವೇರಿ ರೈತರು ರೊಚ್ಚಿಗೆದ್ದಿದ್ದರು. ಬ್ಯಾಡಗಿ ಪಟ್ಟಣದಲ್ಲಿ ಎಪಿಎಂಸಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ದಾಂಧಲೆ ಮಾಡಿದ್ದು, ಈ ವೇಳೆ ಉದ್ರಿಕ್ತಗೊಂಡ ರೈತರು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಇಟ್ಟಿದ್ದರು.
ಘಟನೆಯಲ್ಲಿ ಅಗ್ನಿಶಾಮಕ ದಳದ ವಾಹನ, ಮೂರು ದ್ವಿಚಕ್ರ ವಾಹನ, ಸರ್ಕಾರಿ ವಾಹನಗಳು ಸೇರಿದಂತೆ ಒಟ್ಟು ಎಂಟು ವಾಹನಗಳು ಸುಟ್ಟು ಕರಕಲಾಗಿವೆ. ಪ್ರತಿಭಟನಾಕಾರರು ಎರಡು ಅಂಗಡಿಗಳನ್ನು ಲೂಟಿ ಮಾಡಿದ್ದು, 15 ಲಕ್ಷ ರೂಗಳನ್ನು ದೋಚಿದ್ದಾರೆ. ಈ ಸಂಬಂಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬ್ಯಾಡಗಿಯಲ್ಲಿ ಗಲಾಟೆ ನಡೆಸಿದ ರೈತರ ವಿರುದ್ಧ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Related