ಉಚಿತ ಬಸ್ ಪಾಸ್ ಯಾವುದೇ ಷರತ್ ಇಲ್ಲ: ರಾಮಲಿಂಗಾರೆಡ್ಡಿ

ಉಚಿತ ಬಸ್ ಪಾಸ್ ಯಾವುದೇ ಷರತ್ ಇಲ್ಲ: ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಚುನಾವಣೆಗು ಮುನ್ನ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿದ್ದು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯಕ್ಕೆ ಯಾವುದೇ ಶರತುಗಳು ಅನ್ವಯಿಸುವುದಿಲ್ಲ ಹಾಗಾಗಿ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಾಸ್ ದೊರೆಯುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದರು.

ಸಚಿವ ಸ್ಥಾನದ ಜವಾಬ್ದಾರಿ ವಹಿಸಿಕೊಂಡ ಬಳಿಕ ನಗರದಲ್ಲಿಂದು 4 ನಿಗಮಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಲ್, ಬಿಪಿಎಲ್ ಎಂದು ಹೇಳಿಲ್ಲ. ಹಾಗಾಗಿ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗುವುದು. ಯಾವುದೇ ಷರತ್ತುಗಳು ಅನ್ವಯಿಸುವುದಿಲ್ಲ ಎಂದಿದ್ದಾರೆ.

 

Related