ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ: ರಾಮಲಿಂಗಾ ರೆಡ್ಡಿ!

ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡಲು ಸಾಧ್ಯವಿಲ್ಲ: ರಾಮಲಿಂಗಾ ರೆಡ್ಡಿ!

ಬೆಂಗಳೂರು: ರಾಜ್ಯದಲ್ಲಿ 2023 ನೇ ಸಾಲಿನ ವಿಧಾನಸಭಾ ಚುನಾವಣೆಯ ಮುನ್ನ ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿಗಳನ್ನು ನೀಡಿದ್ದು, ಅದರಲ್ಲಿ ಪ್ರಮುಖವಾಗಿದ್ದು ಎಂದರೆ ಎಲ್ಲಾ ಮಹಿಳೆಯರಿಗೂ ಬಸ್ ಪಾಸ್ ಉಚಿತ ಎಂದು ಭರವಸೆ ನೀಡಿತ್ತು ಆದರಿಗ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದಿಲ್ಲವೆಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.

ಹೌದು,  ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ, ನಾನ್ ಎಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡುವ ಭರವಸೆಯನ್ನು ಚುನಾವಣೆಗು ಮುನ್ನಾ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಇದರಂತೆ ಅಧಿಕಾರಕ್ಕೆ ಬಂದ ಬಳಿಕ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 5 ಗ್ಯಾರಂಟಿಗಳ ಅನುಷ್ಠಾನಕ್ಕೆ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನೂ ನೀಡಿತ್ತು.

ಈ ಗ್ಯಾರಂಟಿಗಳ ಅನುಷ್ಠಾನ ಕುರಿತು ಇಲಾಖೆಯ ಅದಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ನಿನ್ನೆ ಪರಿಶೀಲನಾ ಸಭೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ರಾಮಲಿಂಗಾ ರೆಡ್ಡಿಯವರು, ಬಸ್ ಪಾಸ್ ನೀಡಲು ಫಲಾನುಭವಿಗಳ ಗುರುತಿಸುವುದು ಮುಖ್ಯವಾಗುತ್ತದೆ. ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣದ ಪಾಸ್ ಗಳನ್ನು ನೀಡುವುದು ಸವಾಲಿನ ವಿಚಾರ. ಕರ್ನಾಟಕದಲ್ಲಿ 3.5 ಕೋಟಿ ಮಹಿಳೆಯರಿದ್ದಾರೆ. ಎಲ್ಲರೂ ಬಸ್ ಗಳಲ್ಲಿ ಸಂಚರಿಸುವುದಿಲ್ಲ. ಹೀಗಾಗಿ ಫಲಾನುಭವಿಗಳ ಗುರುತಿಸಿ ಪಾಸ್ ಗಳನ್ನು ನೀಡುತ್ತೇವೆಂದು ಹೇಳಿದ್ದಾರೆ.

 

Related