ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ‘ಸಪ್ತಪದಿ’

ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ‘ಸಪ್ತಪದಿ’

ಉಡುಪಿ  :  ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಇಂದು ‘ಸಪ್ತಪದಿ’ ಉಚಿತ ಸಾಮೂಹಿಕ ವಿವಾಹ ನಡೆಯಿತು.

ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಒಟ್ಟು ನಾಲ್ಕು ಜೋಡಿ ನವ ದಂಪತಿಗಳು ಸಪ್ತಪದಿ ತುಳಿದು ಹೊಸ ಜೀವನಕ್ಕೆ ಪದಾರ್ಪಣೆ ಮಾಡಿದರು.

ದೇವಸ್ಥಾನದ ವತಿಯಿಂದ ವರನಿಗೆ ಐದು ಸಾವಿರ ರೂ. ಮತ್ತು ವಧುವಿಗೆ 10 ಸಾವಿರ ರೂ. ನೀಡಿ ಗೌರವಿಸಲಾಯಿತು. ನವ ದಂಪತಿಗಳಿಗೆ ಶ್ರೀ ಮೂಕಾಂಬಿಕೆಗೆ ಪೂಜೆ ಮಾಡಿ ಮಂಗಲಸೂತ್ರ ನೀಡಲಾಯಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ವಧು-ವರರನ್ನು ಹರಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುಕುಮಾರ್ ಶೆಟ್ಟಿ, ತಾಯಿ ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಮದುವೆಯಾಗುವುದೇ ಒಂದು ಪುಣ್ಯ. ವೆಚ್ಚದ ಮದುವೆ ಕಡಿಮೆಯಾಗಬೇಕು, ಸರಳ ರೀತಿಯಲ್ಲಿ ಮದುವೆಯಾಗಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು.

Related